ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುರ್ಜ್ ಖಲೀಫಾ ಮೇಲೆ ಕಿಚ್ಚನ 'ವಿಕ್ರಾಂತ್ ರೋಣ' ವೈಭವ

ದುಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾ ಲೋಗೋದೊಂದಿಗೆ 2000 ಅಡಿಯ ಕಿಚ್ಚನ ವರ್ಚುವಲ್ ಕಟೌಟ್ ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದ ಮೇಲೆ ಭಾನುವಾರ ಅನಾವರಣಗೊಂಡಿದೆ.

ಚಂದನವನದಲ್ಲಿ 25 ವಸಂತಗಳನ್ನು ಸಾರ್ಥಕವಾಗಿ ಪೂರೈಸಿರುವ ಸುದೀಪ್‌ ಅವರ ಬಹು ನಿರೀಕ್ಷೆಯ ಚಿತ್ರ ಇದಾಗಿದೆ. ಭಾನುವಾರ ರಾತ್ರಿ 9 ಗಂಟೆಗೆ ಸರಿಯಾಗಿ ಲೇಸರ್‌ ಬೆಳಕಿನ ಮೂಲಕ ಚಿತ್ರದ ಟೈಟಲ್ ಮತ್ತು ಕಟೌಟ್‌ಗಳು ಬುರ್ಜ್ ಖಲೀಫಾ ಮೇಲೆ ಮೂಡಿಬಂದವು. ಸುದೀಪ್‌ ಅವರ ಬೆಳ್ಳಿ ಹೆಜ್ಜೆಯ ಸಂಭ್ರಮವನ್ನು ಸ್ಮರಣೀಯಗೊಳಿಸಲು ‘ವಿಕ್ರಾಂತ್ ರೋಣ’ ಚಿತ್ರತಂಡ ಬುರ್ಜ್ ಖಲೀಫಾ ಮೇಲೆ ಚಿತ್ರದ ಶೀರ್ಷಿಕೆ ಮತ್ತು ಚಿತ್ರದ ಮೂರು ನಿಮಿಷಗಳ ಟೀಸರ್ ಬಿಡುಗಡೆ ಮಾಡಲು ಎರಡು ತಿಂಗಳ ಹಿಂದೆಯೇ ಯೋಜನೆ ರೂಪಿಸಿತ್ತು. ಈ ಅಚ್ಚರಿಯನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದ ಕಿಚ್ಚನ ಅಭಿಮಾನಿಗಳೂ ಅಕ್ಷರಶಃ ಖುಷಿಗೊಂಡರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್, ‘ಬುರ್ಜ್ ಖಲೀಫಾ ಮೇಲೆ ಕನ್ನಡ ಧ್ವಜ ಕಾಣಿಸಿದ್ದು ನನಗೆ ತುಂಬಾ ಖುಷಿಯಾಯಿತು. ನಮ್ಮ ಚಿತ್ರತಂಡ ಇಂಥದ್ದೊಂದು ಅಚ್ಚರಿ ನೀಡಿದ್ದು ನನಗೆ ಇನ್ನಷ್ಟು ಸಂತೋಷ ತಂದಿದೆ’ ಎಂದು ಹೇಳಿದರು.

Edited By : Vijay Kumar
PublicNext

PublicNext

01/02/2021 07:41 am

Cinque Terre

51 K

Cinque Terre

3

ಸಂಬಂಧಿತ ಸುದ್ದಿ