ಬೆಂಗಳೂರು: ಪ್ರೇಮಿಗಳ ದಿನದಂದೇ ಬಹುದಿನಗಳಿಂದ ಪ್ರೀತಿಸುತ್ತಿದ್ದ ಚಿತ್ರನಟರಾದ ಕೃಷ್ಣ ಮತ್ತು ಮಿಲನಾ ಅವರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್ ಫುಲ್ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆ ನಡೆದಿದೆ.
ಮದುವೆಗೆ ಚಿತ್ರರಂಗದ ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಇದಾಗಲೇ ಮೆಹಂದಿ ಹಾಗೂ ಅರಿಶಿಣ ಶಾಸ್ತ್ರಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜೋಡಿ ಇದೀಗ ಮದುವೆ ಕಾರ್ಯಕ್ರಮದ ಫೋಟೋವನ್ನೂ ಶೇರ್ ಮಾಡಿದ್ದಾರೆ. ನಿನ್ನೆ ಸಂಜೆ ಸಂಗೀತ ಕಾರ್ಯಕ್ರಮದ ನಡೆದಿತ್ತು. ಕೃಷ್ಣ ಮತ್ತು ಮಿಲನಾ ಮೊದಲಿಗೆ ಜತೆಯಾಗಿ ನಟಿಸಿದ್ದು ‘ನಮ್ ದುನಿಯಾ ನಮ್ ಸ್ಟೈಲ್’ ಚಿತ್ರದಲ್ಲಿ. ಆ ನಂತರ ‘ಚಾರ್ಲಿ’ಯೆಂಬ ಇನ್ನೊಂದು ಚಿತ್ರದಲ್ಲಿ ಇಬ್ಬರೂ ನಟಿಸಿದ್ದರು.
ಲಾಕ್ ಡೌನ್ ನಿಂದಾಗಿ ಈ ಪ್ರೇಮಿಗಳ ದಿನಕ್ಕೆ ಮದುವೆಗೆ ಮುಹೂರ್ತ ಸಿಕ್ಕಿತ್ತು.
PublicNext
14/02/2021 12:47 pm