ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಸಂಜನಾ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಸಂಜನಾ ಎಲ್ಲಿದ್ದಾರೆ, ಏನ್ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿರಲಿಲ್ಲ. ಇತ್ತೀಚಿಗೆ ಆಸ್ಪತ್ರೆಗೆ ದಾಖಲಾಗಿರುವ ಫೋಟೋ ಶೇರ್ ಮಾಡುವ ಮೂಲಕ ಸಾರ್ವಜನಿಕವಾಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಬೇಗ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿರುವ ಸಂಜನಾ ಮತ್ತೊಂದು ಫೋಟೋ ಶೇರ್ ಮಾಡಿದ್ದಾರೆ.
ಸಂಜನಾ ಮನೆಗೆ ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ ಮಂಜು ಭೇಟಿ ನೀಡುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಶೇರ್ ಮಾಡಿ, 'ಕೆ ಮಂಜು ಅಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಧನ್ಯವಾದಗಳು ಅಣ್ಣ ನಿಮ್ಮ ಭೇಟಿಗೆ' ಎಂದು ಬರೆದುಕೊಂಡಿದ್ದಾರೆ.
PublicNext
15/02/2021 04:07 pm