ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೀರ್ತಿ ಸುರೇಶ್ ಮದುವೆ ಸುದ್ದಿ ನಿಜವಾ?

ನಟಿ ಕೀರ್ತಿ ಸುರೇಶ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಪ್ರೇಮ ಸಂಬಂಧ ಹಾಗೂ ವಿವಾಹದ ಕುರಿತಾಗಿ ಸಾಕಷ್ಟು ಸುದ್ದಿಗಳ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿವೆ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಕೀರ್ತಿ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಅನಿರುದ್ಧ್ ಅವರ ಜತೆಗಿರುವ ಫೋಟೋವನ್ನು ಹಂಚಿಕೊಂಡಿದ್ದರು. ಆಗಿನಿಂದ ಇವರಿಬ್ಬರ ವಿವಾಹದ ಸುದ್ದಿ ಹರಿದಾಡಲಾರಂಭಿಸಿದೆ. ಆದರೆ ಇವರ ಮದುವೆ ಸುದ್ದಿ ಸುಳ್ಳೆಂದು ಇಂಗ್ಲಿಷ್ ಪತ್ರಿಕೆಯೊಂದು ವರದಿ ಮಾಡಿದೆ.

ಸದ್ಯಕ್ಕೆ ಇವರಿಬ್ಬರ ಆಪ್ತ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಇವರಿಬ್ಬರು ಒಳ್ಳೆಯ ಸ್ನೇಹಿತರಷ್ಟೆ ಎಂದು ಹೇಳಲಾಗಿದೆ.

ಅಲ್ಲದೆ ಅನಿರುದ್ಧ್ ಸಿನಿಮಾವೊಂದಕ್ಕೆ ಸಂಗೀತ ನಿರ್ದೇಶನ ಮಾಡುವಲ್ಲಿ ಬ್ಯುಸಿಯಾಗಿದ್ದರೆ, ಕೀರ್ತಿ ಸಿನಿಮಾ ಚಿತ್ರೀಕರಣದಲ್ಲಿ ವ್ಯಸ್ತವಾಗಿದ್ದಾರೆ.

Edited By : Nirmala Aralikatti
PublicNext

PublicNext

16/02/2021 04:03 pm

Cinque Terre

36.44 K

Cinque Terre

0