ಬೆಂಗಳೂರು: ಸ್ಯಾಂಡಲ್‌ವುಡ್ ನಟ ರಾಘವೇಂದ್ರ ರಾಜ್ಕುಮಾರ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಘಣ್ಣ ಅವರು ಇಂದು ಬೆಳಗ್ಗೆಯಿಂದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದರಿಂದ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ರಾಘಣ್ಣರಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿದ ನಟ ಶಿವಣ್ಣ ಸಹೋದರನ ಆರೋಗ್ಯ ವಿಚಾರಿಸಿದರು. ರಾಘಣ್ಣ ಅವರನ್ನು ಆಸ್ಪತ್ರೆಯಿಂದ ತಡರಾತ್ರಿ ಅಥವಾ ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
PublicNext
16/02/2021 08:57 pm