ಬೆಂಗಳೂರು: ರಾಘವೇಂದ್ರ ರಾಜ್ಕುಮಾರ್ ಅವರಿಗೆ ಮಂಗಳವಾರ ರಾತ್ರಿ ಅನಾರೋಗ್ಯ ಹಿನ್ನೆಲೆಯಲ್ಲಿ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಆಸ್ಪತ್ರೆಗೆ ಭೇಟಿ ನೀಡಿದ ರಾಘಣ್ಣ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಘಣ್ಣ ಸಖತ್ ಆಗಿ ಇದ್ದಾರೆ, ಆರಾಮ್ ಆಗಿದ್ದಾರೆ. ಅವರಿಗೆ ಏನೂ ಆಗಿಲ್ಲ. ಹೀಗಾಗಿ ಯಾರೂ ಆತಂಕಪಡಬೇಡಿ. ಅಭಿಮಾನಿಗಳ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ ಎಂದು ತಿಳಿಸಿದರು.
PublicNext
17/02/2021 07:42 am