ಬೆಂಗಳೂರು: ನ್ಯಾಷನಲ್ ಕ್ರಶ್, ನಟಿ ರಶ್ಮಿಕಾ ಮಂದಣ್ಣ ಅತಿ ಕಡಿಮೆ ಸಮಯದಲ್ಲಿ ಸಿನಿಮಾ ರಂಗದಲ್ಲಿ ಬಹು ಬೇಡಿಕೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. 'ಕಿರಿಕ್ ಪಾರ್ಟಿ' ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಇಂದು ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿದ್ದು, ಬಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದಾರೆ.
ಸದ್ಯ ರಶ್ಮಿಕಾ ಮಂದಣ್ಣ ಬಾಲಿವುಡ್ ಚಿತ್ರದಲ್ಲಿ ನಟಿಸಲು 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, "ನಾನು ಭಾರಿ ಸಂಭಾವನೆ ಪಡೆದುಕೊಂಡಿದ್ದೇನೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆ ಸುದ್ದಿಗಳು ನಿಜವಾಗಿದ್ದರೆ ಚೆನ್ನಾಗಿರುತ್ತಿತ್ತು. ಸುದ್ದಿ ಹರಡಿರುವಷ್ಟು ಸಂಭಾವನೆ ಪಡೆಯುವುದು ನನ್ನ ಕನಸು" ಎಂದು ಹೇಳಿದ್ದಾರೆ.
PublicNext
20/02/2021 04:45 pm