ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಮತ್ತೊಮ್ಮೆ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ.
ಕರೀನಾ ಕಪೂರ್ ಖಾನ್ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಬೇಬೊ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ 4:45ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ಡಿಸೆಂಬರ್ 2016ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮೂರ್ ಅಲಿ ಖಾನ್ ಜನಿಸಿದ್ದಾನೆ. ಈ ಜೋಡಿಯು ಮೊದಲ ಬಾರಿಗೆ ತಶಾನ್ ಸಿನಿಮಾ ಸೆಟ್‍ನಲ್ಲಿ ಭೇಟಿಯಾಗಿತ್ತು. ನಂತರ 2012ರಲ್ಲಿ ವಿವಾಹವಾಗಿದ್ದಾರೆ.
PublicNext
21/02/2021 01:27 pm