ಬೆಂಗಳೂರು: ಬ್ರಾಹ್ಮಣರಿಗೆ ಸಂಬಂಧಿಸಿದ ವಿವಾದಿತ ದೃಶ್ಯಗಳನ್ನು ತೆಗೆದು ಹಾಕಲು ಪೊಗರು ಟೀಮ್ ನಿರ್ಧರಿಸಿದೆ. ಈ ಕುರಿತಾಗಿ ಸಿನಿಮಾ ನಿರ್ದೇಶಕ ನಂದಕಿಶೋರ್ ಸಹ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ.
ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಮಾತನಾಡಿದ್ದಾರೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದ ಮೂರ್ತಿ ಅವರೊಂದಿಗೆ ಸಿನಿಮಾ ತಂಡದವರು ಅರವಿಂದ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ.
ಪೊಗರು ನಿರ್ಮಾಪಕ ಬಿ.ಕೆ ಗಂಗಾಧರ್ ಪರ ನಿರ್ಮಾಪಕ ಸೂರಪ್ಪ ಬಾಬು ಮಾತನಾಡಿ, ಪೊಗರು ಸಿನಿಮಾ ಸೆನ್ಸಾರ್ ಆಗಿದೆ. ಈ ವಿಚಾರವನ್ನು ಕಾನೂನಾತ್ಮಕವಾಗಿ ಬಗೆಹರಿಸಬೇಕು. ಒಮ್ಮೆ ಸೆನ್ಸಾರ್ ಆದಮೇಲೆ ಅದನ್ನು ಮತ್ತೆ ಸೆನ್ಸಾರ್ ಮಂಡಳಿ ಮೂಲಕವೇ ಬಗೆಹರಿಸಬೇಕು. ನಾವು ಈಗಾಗಲೇ ಸೆನ್ಸಾರ್ ಮಂಡಳಿಗೆ ಮನವಿ ಮಾಡಿದ್ದೇವೆ. ಆಕ್ಷೇಪಾರ್ಹ ದೃಶ್ಯಗಳನ್ನ ತೆಗೆಯಲು 48 ಗಂಟೆಗಳ ಕಾಲ ಅವಕಾಶ ಬೇಕು ಎಂದು ಹೇಳಿದ್ದಾರೆ.
PublicNext
23/02/2021 05:33 pm