ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಕಾಶ್ಮೀರದಲ್ಲಿ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಪುನೀತ್ ಶೂಟಿಂಗ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿದ್ದವು. ಇದೀಗ, ಪುನೀತ್ ರಾಜ್ ಕುಮಾರ್ ಹೊಸ ಫೋಟೋ ಬಹಿರಂಗವಾಗಿದೆ. ಯೋಧನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಅಪ್ಪು ಲುಕ್ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಯೋಧನ ಗೆಟಪ್‌ನಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿದ ಫ್ಯಾನ್ಸ್, ಜೇಮ್ಸ್ ಸಿನಿಮಾದಲ್ಲಿ ಅಪ್ಪು ಯೋಧ ಆಗಿರಬಹುದಾ ಎಂದು ಯೋಚಿಸುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇಲ್ಲ.
PublicNext
26/02/2021 08:16 pm