ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಸದ್ಯ ಏಕ್ ಲವ್ ಯಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪತ್ನಿ ಹಾಗೂ ನಟಿ ರಕ್ಷಿತಾ ಅವರ ಸಹೋದರ ರಾಣಾ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ 'ಏಕ್ ಲವ್ ಯಾ' ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.
ಇದರ ಬೆನ್ನಲ್ಲೇ ಪ್ರೇಮ್ ಹೊಸ ಸಿನಿಮಾದ ಸುದ್ದಿ ಸದ್ದು ಮಾಡುತ್ತಿದ್ದಾರೆ. ನಿರ್ದೇಶಕ ಪ್ರೇಮ್ ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಚರ್ಚೆ ನಡೆಯುತ್ತಿದೆ. ಪ್ರೇಮ್ ಮುಂದಿನ ಸಿನಿಮಾದಲ್ಲಿ ಸ್ಟಾರ್ ನಟರ ಹೆಸರು ಕೇಳಿಬರುತ್ತಿತ್ತು. ಇದೀಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ನಟ ಧ್ರುವ ಸರ್ಜಾ ಜೊತೆ ಪ್ರೇಮ್ ಹೊಸ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.
ಈಗಾಗಲೇ ಸಿನಿಮಾ ವಿಚಾರವಾಗಿ ಪ್ರೇಮ್ ಮತ್ತು ಧ್ರುವ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಇದೊಂದು ಮಾಸ್ ಕಮರ್ಷಿಯಲ್ ಸಿನಿಮಾವಾಗಿದ್ದು, ಪ್ರೇಮ್ ಮತ್ತು ಧ್ರುವ ಒಟ್ಟಿಗೆ ಕೆಲಸ ಮಾಡುವುದು ಬಹುತೇಕ ಖಚಿತ ಎನ್ನುತಿವೆ ಮೂಲಗಳು. ಅಂದಹಾಗೆ ಈ ಮೆಗಾ ಪ್ರಾಜೆಕ್ಟ್ ಗೆ ದೊಡ್ಡ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಲು ಮುಂದಾಗಿದೆಯಂತೆ.
PublicNext
03/08/2021 12:57 pm