ಸರಣಿ ವಿವಾದಗಳಿಂದ ಕಂಗೆಟ್ಟಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ನೆಮ್ಮದಿಗಾಗಿ ಟೆಂಪಲ್ ರನ್ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಸಂಸದೆ ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ದರ್ಶನ್ ಅವರು ತಿರುಪತಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ ಸಂಜೆ ಸ್ವತಃ ಸುಮಲತಾ ಅವರೇ ತಿರುಪತಿಗೆ ಹೋಗುತ್ತಿರುವುದಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ವೇಳೆ ನಟ ದರ್ಶನ್, ಅಭಿಷೇಕ್ ಜೊತೆ ಸುಮಲತಾ ಇರುವ ಫೋಟೋ ಹಂಚಿಕೊಂಡಿದ್ದರು.
ಸೋಮವಾರ ಬೆಳಗ್ಗೆ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಪಡೆದಿರುವ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ನಟ ದರ್ಶನ್ ಮತ್ತು ಅಭಿಷೇಕ್ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಗಮನ ಸೆಳೆದಿದೆ. ಇದಕ್ಕೂ ಮುಂಚೆ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿರುವ ದರ್ಶನ್ ನಾಡದೇವತಗೆ ಪೂಜೆ ಸಲ್ಲಿಸಿ ಬಂದಿದ್ದಾರೆ.
PublicNext
09/08/2021 12:17 pm