ಪ್ರಕಾಶ್ ರೈ ತಮಿಳು ನಟ ಧನುಷ್ ನಟನೆಯ ‘D44’ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಆಗಸ್ಟ್ 10 ರಂದು ಚೆನ್ನೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಅಲ್ಲೇ ಸ್ಥಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೈದರಾಬಾದ್ ಗೆ ತೆರಳಿದ್ದರು. ಇದೀಗ ಶಸ್ತ್ರ ಚಿಕಿತ್ಸೆ ಮುಗಿದಿದೆ.
ಸರ್ಜರಿ ಬಳಿಕ ಮೊದಲ ಫೋಟೋ ಶೇರ್ ಮಾಡಿರುವ ಪ್ರಕಾಶ್, “ಡೆವಿಲ್ ಈಸ್ ಬ್ಯಾಕ್. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ನನ್ನ ಆತ್ಮೀಯ ಸ್ನೇಹಿತ ಡಾ.ಗುರುವರೆಡ್ಡಿ ಮತ್ತು ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಗೆ ಧನ್ಯವಾದಗಳು. ಸದ್ಯದಲ್ಲೇ ಕೆಲಸಕ್ಕೆ ಮರಳುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
PublicNext
12/08/2021 02:54 pm