ಬೆಂಗಳೂರು : ದೇಶದ ಹೆಮ್ಮೆಯ ವೇಟ್ ಲಿಫ್ಟರ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಸಲ್ಮಾನ್ ಖಾನ್ ಅವರು ಮೀರಾಬಾಯಿ ಅವರನ್ನು ಭೇಟಿಯಾದ ವಿಚಾರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಮೀರಾಬಾಯಿ ಜತೆ ತೆಗೆಸಿಕೊಂಡ ಫೋಟೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.
ಈ ಟ್ವೀಟ್ ಅನ್ನು ಮೀರಾಬಾಯಿ ರಿಟ್ವೀಟ್ ಮಾಡಿದ್ದು, ನಾನು ನಿಮ್ಮ ದೊಡ್ಡ ಅಭಿಮಾನಿಯಾಗಿದ್ದೇನೆ. ನಿಮ್ಮನ್ನು ಭೇಟಿಯಾಗಬೇಕೆಂಬ ಕನಸು ಕೊನೆಗೂ ಈಡೇರಿದೆ ಎಂದಿದ್ದಾರೆ.
PublicNext
12/08/2021 03:24 pm