ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುನಿಲ್ ಪುರಾಣಿಕ್ ಮೇಲೆ ನಾಲ್ಕುವರೆ ಕೋಟಿ ಭ್ರಷ್ಟಾಚಾರ ಆರೋಪ ಮಾಡಿದ ಮದನ್ ಪಟೇಲ್

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸುಮಾರು 4.50 ಕೋಟಿ ಹಣ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮದನ್ ಪಟೇಲ್ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮದನ್ ಪಟೇಲ್, ಎಲ್ಲ ದಾಖಲೆಗಳು ನನ್ನ ಬಳಿ ಇದ್ದು ಅವನ್ನು ಎಸಿಬಿಗೆ ನೀಡಿದ್ದೇನೆ ಎಂದಿದ್ದಾರೆ.

2018-19ರ ಸಾಲಿನಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ನಾಲ್ಕು ಕೋಟಿಯನ್ನು ಆಗಿನ ಅಕಾಡೆಮಿ ಅಧ್ಯಕ್ಷರು ಖರ್ಚು ಮಾಡಿದ್ದರು. ಅದೇ 2019-20ನೇ ಸಾಲಿನ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ಬರೋಬ್ಬರಿ 8 ಕೋಟಿ ಖರ್ಚು ಮಾಡಲಾಗಿದೆ. ದುಪ್ಪಟ್ಟು ಹಣ ಖರ್ಚು ಮಾಡಿ ಸರ್ಕಾರದ ಬೊಕ್ಕಸಕ್ಕೆ ನಾಲ್ಕು ಕೋಟಿ ನಷ್ಟ ಮಾಡಿದ್ದಾರೆ ಎಂದು ಮದನ್ ಪಟೇಲ್ ಆರೋಪ ಮಾಡಿದ್ದಾರೆ.

ತಮ್ಮ ಮೇಲಿನ ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಈ ಎಲ್ಲ ವಿಷಯಗಳಿಗೆ ಸುಮಾರು ಎಂಟು ತಿಂಗಳ ಹಿಂದೆ ಸ್ಪಷ್ಟನೆ ನೀಡಿದ್ದೇನೆ. ಮದನ್ ಪಟೇಲ್ ಅವರು ಈಗ ಈ ವಿಷಯದ ಬಗ್ಗೆ ಯಾವ ಉದ್ದೇಶಕ್ಕಾಗಿ ಮಾತಾಡುತ್ತಿದ್ದಾರೋ ಗೊತ್ತಿಲ್ಲ. ಸಮಯ ಬಂದಾಗ ಸೂಕ್ತ ವೇದಿಕೆಯಲ್ಲಿ ಇದಕ್ಕೆಲ್ಲ ಉತ್ತರ ನೀಡುತ್ತೇನೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

24/08/2021 12:40 pm

Cinque Terre

48.3 K

Cinque Terre

2

ಸಂಬಂಧಿತ ಸುದ್ದಿ