ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಾಲಿವುಡ್​ನ ಟಾಪ್​ ನಟ ನಟಿಯರಿಗೂ ಡ್ರಗ್ಸ್ ಕಂಟಕ.!

ಹೈದರಾಬಾದ್: ಸ್ಯಾಂಡಲ್‌ವುಡ್​ ಡ್ರಗ್​ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಇತರೆ ಆರೋಪಿಗಳು ಮಾದಕ ವಸ್ತು ಸೇವಿಸಿದ್ದರು ಎಂಬುವುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಬೀತಾಗಿದೆ. ಈ ಬೆನ್ನಲ್ಲೇ ಪಕ್ಕದ ಟಾಲಿವುಡ್​​ನಲ್ಲಿ 4 ವರ್ಷಗಳ ಹಿಂದಿನ ಡ್ರಗ್​ ಕೇಸ್​ಗೆ ಮರುಜೀವ ಸಿಕ್ಕಿದೆ.

ಬಾಹುಬಲಿ ಸಿನಿಮಾ ಖ್ಯಾತಿಯ ನಟ ರಾಣಾ ದಗ್ಗುಬಾಟಿ, ನಟ ರವಿತೇಜ, ನಟಿ ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ 10 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್​​​​ ನೀಡಿದೆ. ಸೆಪ್ಟೆಂಬರ್ 6 ರಂದು ರಾಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 8 ರಂದು ರಾಣಾ ದಗ್ಗುಬಾಟಿ, ಸೆಪ್ಟೆಂಬರ್ 9 ರಂದು ತೆಲುಗು ನಟ ರವಿತೇಜ ಮತ್ತು ಸೆಪ್ಟೆಂಬರ್ 31 ರಂದು ನಿರ್ದೇಶಕ ಪುರಿ ಜಗನ್ನಾಥ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

26/08/2021 08:56 am

Cinque Terre

59.57 K

Cinque Terre

2