ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್ಲಿದ್ದೀರೋ ಅಲ್ಲಿಂದಲೇ ಶುಭಾಶಯ ತಿಳಿಸಿ: ಫ್ಯಾನ್ಸ್‌ಗೆ ಕಿಚ್ಚನ ಮನವಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕಿಚ್ಚನಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಸೆಪ್ಟಂಬರ್ 2ರಂದು ಕಿಚ್ಚನ ಹುಟ್ಟುಹಬ್ಬವಿದೆ. ಹುಟ್ಟುಹಬ್ಬ ಆಚರಣೆಗೂ ಮೊದಲೇ ಸುದೀಪ್ ಅಭಿಮಾನಿಗಳಲ್ಲಿ ವಿಶೇಷವಾದ ಮನವಿ ಮಾಡಿದ್ದಾರೆ.

ಸುದೀಪ್ ಹುಟ್ಟುಹಬ್ಬ ಅಂದ್ಮೇಲೆ ಅಭಿಮಾನಿಗಳ ದೊದ್ದ ದಂಡು ಸೇರಿರುತ್ತೆ. ರಾತ್ರಿಯಿಂದನೇ ಅಭಿಮಾನಿಗಳು ಮನೆ ಮುಂದೆ ಕ್ಯೂ ನಿಂತಿರುತ್ತದ್ದರು. ಸುದೀಪ್ ನೋಡಲು, ಮಾತನಾಡಿಸಲು, ವಿಶ್ ಮಾಡಲು ಕಾತರದಿಂದ ಕಾಯುತ್ತಿದ್ದರು. ಕಿಚ್ಚನ ಮನೆ ಮುಂದೆ ಅಭಿಮಾನಿಗಳ ಸಂಭ್ರಮ, ಸಡಗರ ಮನೆ ಮಾಡಿರುತ್ತಿತ್ತು. ಆದರೆ ಕಳೆದ ವರ್ಷದಿಂದ ಈ ಸಂಭ್ರಮ ಸಡಗರಕ್ಕೆ ಬ್ರೇಕ್ ಬಿದ್ದಿದೆ. ಕೊರೊನಾ ಭೀಕರ ಪರಿಸ್ಥಿತಿ ಈ ಎಲ್ಲಾ ಸಂಭ್ರಮವನ್ನು ಕಿತ್ತುಕೊಂಡಿದೆ.

ಕೊರೊನಾ ಕಾರಣದಿಂದ ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಿಚ್ಚ ಅಭಿಮಾನಿಗಳಲ್ಲಿ ಪ್ರೀತಿಯ ಮನವಿ ಮಾಡಿದ್ದಾರೆ. ಕೊರೊನಾ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವ ಎಲ್ಲಿದ್ದಿರೋ ಅಲ್ಲಿಂದಲೇ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ ಎಂದು ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

28/08/2021 04:08 pm

Cinque Terre

66.79 K

Cinque Terre

1