ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಕೋವಿಡ್ ಭೀತಿಯಿಂದ ಈ ವರ್ಷವೂ ಅಭಿನಯ ಚಕ್ರವರ್ತಿ ಅಭಿಮಾನಿಗಳ ಜೊತೆ ಜನುಮದಿನ ಸಂಭ್ರಮಿಸುತ್ತಿಲ್ಲ. ಆದರೆ, ಆನ್‌ಲೈನ್ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡ್ತೇನೆ ಎಂದು ಸುದೀಪ್ ಹೇಳಿದ್ದರು. ಅಭಿಮಾನಿಗಳನ್ನು ಭೇಟಿ ಮಾಡದೆ ಇದ್ದರೂ ಅವರ ಫ್ಯಾನ್ಸ್ ಕಿಚ್ಚನ ಉತ್ಸವವನ್ನು ಬಹಳ ಜೋರಾಗಿಯೇ ಆಚರಣೆ ಮಾಡುತ್ತಿದ್ದಾರೆ.
ಇನ್ನು ಸುದೀಪ್ ಅವರ ಇಂಡಸ್ಟ್ರಿ ಸ್ನೇಹಿತರು, ಆಪ್ತರು ಸಹ ಬಾದ್‌ಶಾ ಬರ್ತಡೇಗೆ ಪ್ರೀತಿಯಿಂದ ಶುಭಕೋರಿದ್ದಾರೆ. ನಟಿ ರಕ್ಷಿತಾ ಪ್ರೇಮ್, ನಿರ್ದೇಶಕ ಜೋಗಿ ಪ್ರೇಮ್, ನಟ ಸತೀಶ್ ನೀನಾಸಂ, ಕಾರ್ತಿಕ್ ಜಯರಾಂ, ನಿರ್ದೇಶಕ ರಿಷಬ್ ಶೆಟ್ಟಿ, ರಘುರಾಮ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಟ್ವಿಟ್ಟರ್ ಮೂಲಕ ಅಭಿನಯ ಚಕ್ರವರ್ತಿಗೆ ಶುಭಾಶಯ ತಿಳಿಸಿದ್ದಾರೆ.
PublicNext
02/09/2021 09:26 am