ಬೆಂಗಳೂರು : ಇತ್ತೀಚೆಗಷ್ಟೆ ಸೀಮಂತ ಕಾರ್ಯ ಮಾಡಿಸಿಕೊಂಡಿದ್ದ ರೇವತಿ ಇಂದು ಗಂಡು ಮಗುವಿಗೆ ಜನ್ಮವಿತ್ತಿದ್ದಾಳೆ.ಸದ್ಯ ದೊಡ್ಡ ಗೌಡರ ಮನೆಯಲ್ಲಿ ಸಂಭ್ರಮ ಇಮ್ಮಡಿಗೊಂಡಿದೆ. ಹೌದು ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಇಂದು ನಿಖಿಲ್ ಕುಮಾರ ಸ್ವಾಮಿ ಹಾಗೂ ರೇವತಿ ದಂಪತಿ ತಂದೆ-ತಾಯಿ ಆಗಿ ಬಡ್ತಿ ಪಡೆದಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಾತನಾದ್ರೇ.ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗಳು ಗಂಡು ಮಗುವಿಗೆ ತಂದೆ-ತಾಯಿಗಳಾಗಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿರೋದಾಗಿ ವೈದ್ಯರು ತಿಳಿಸಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯವನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಚಾರಿಸಲಿದ್ದಾರೆ.
PublicNext
24/09/2021 01:52 pm