ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ವಿಜಯಲಕ್ಷ್ಮೀ ತಾಯಿ ನಿಧನ: ಅಮ್ಮನ ನೆನೆದು ಕಣ್ಣೀರು

ಬೆಂಗಳೂರು: ನಟಿ ವಿಜಯಲಕ್ಷ್ಮಿ ಅವರ ತಾಯಿ ನಿಧನರಾಗಿದ್ದಾರೆ. ನಮ್ಮ ತಾಯಿ ಆರೋಗ್ಯ ಸರಿಯಿಲ್ಲ, ನಮ್ಮ ಅಕ್ಕನ ಆರೋಗ್ಯ ಸರಿಯಲ್ಲ, ಯಾರಾದರೂ ಸಹಾಯ ಮಾಡಿ ಎಂದು ಅವರು ಆಗಾಗ ವಿಡಿಯೋ ಮೂಲಕ ಅಂಗಲಾಚುತ್ತಿದ್ದರು.

75 ವರ್ಷದ ವಿಜಯಾ ಸುಂದರಂ ಅವರು ಇಂದು ಕೊನೆಯುಸಿರೆಳೆದರು. ವಿಜಯಲಕ್ಷ್ಮಿ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸ್ವತಃ ವಿಜಯಲಕ್ಷ್ಮಿ ಅವರೇ ಹೇಳಿಕೊಂಡಿದ್ದ ಪ್ರಕಾರ ಚಿಕಿತ್ಸೆಯಲ್ಲಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವಿಜಯಾ ಸುಂದರ ಸಾವನ್ನಪ್ಪಿದ್ದಾರೆ.

ವಿಜಯಲಕ್ಷ್ಮಿ ಅವರು ಸದ್ಯ ಚಿತ್ರರಂಗದಲ್ಲಿ ಸಕ್ರಿಯವಾಗಿಲ್ಲ. ಸಹೋದರಿ ಉಷಾ ಮತ್ತು ತಾಯಿಯ ಅನಾರೋಗ್ಯ ವಿಚಾರಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಚಿತ್ರರಂಗ ಹಾಗೂ ಹಿರಿಯ ನಟಿ ಜಯಪ್ರದಾ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ, ಯಾರೂ ಸಹಾಯ ಮಾಡ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

28/09/2021 11:20 am

Cinque Terre

79.9 K

Cinque Terre

3