ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಸತ್ಯಜಿತ್ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
PublicNext
04/10/2021 01:37 pm