ಮುಂಬೈ: ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗುತ್ತಿದ್ದಂತೆ ಶಾರೂಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಮುಂಬೈನಲ್ಲಿರುವ ಶಾರೂಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಆರ್ಯನ್ ಬಂಧನದ ಕುರಿತಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡ್ತಿದ್ದ ಆರೋಪದಡಿ ರಾಷ್ಟ್ರೀಯ ಮಾದಕ ದ್ರವ್ಯ ತಡೆ ದಳ (ಎನ್ ಸಿಬಿ) ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಒಳಗೊಂಡು 3 ಮಂದಿಯನ್ನು ಬಂಧಿಸಿದೆ. ಆತನನ್ನ ನಿನ್ನೆ ಎನ್ ಸಿಬಿ ಕೋರ್ಟ್ ಒಂದು ದಿನದ ಮಟ್ಟಿಗೆ ಎನ್ ಸಿಬಿ ಕಸ್ಟಡಿಗೆ ಒಪ್ಪಿಸಿದೆ.
ಆರ್ಯನ್ ಖಾನ್ ಇವತ್ತು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದು, ಎನ್ ಸಿಬಿ ಮತ್ತೆ ಆತನ ಕಸ್ಟಡಿ ಕೇಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಶೀಘ್ರವೇ ಶಾರೂಖ್ ಖಾನ್ ಮಗ ಜಾಮೀನಿನಡಿ ಬಿಡುಗಡೆಯಾದರೂ ಅಚ್ಚರಿ ಇಲ್ಲ. ಮಾದಕ ದ್ರವ್ಯ ಹೊಂದಿರುವ, ಮಾದಕ ದ್ರವ್ಯ ಖರೀದಿ, ಸಾಗಾಟ ಆರೋಪದಡಿ ಶಾರೂಖ್ ಪುತ್ರನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
PublicNext
04/10/2021 03:19 pm