ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಈ ಸಂಬಂಧ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ಮೆಗಾಸ್ಟಾರ್, 'ಬಲಗೈ ನೋವಾಗಿದ್ದಕ್ಕೆ ವೈದ್ಯರನ್ನು ಸಂಪರ್ಕಿಸಿದೆ. ಮಣಿಕಟ್ಟಿನ ಬಳಿಯ ನರ ಸಮಸ್ಯೆ ಇದೆ ಅಂತೆ. ಅಪೋಲೋ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಧ್ಯದ ನರವನ್ನು ಶಸ್ತ್ರ ಚಿಕಿತ್ಸೆಯಿಂದ ಸರಿಪಡಿಸಲಾಗಿದೆ. ಶಸ್ತ್ರ ಚಿಕಿತ್ಸೆಯ ನಂತರ 15 ದಿನಗಳವರೆಗೆ ಬಲಗೈ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತದೆ' ಎಂದು ತಿಳಿಸಿದ್ದಾರೆ.
ಸದ್ಯ ಚಿರಂಜೀವಿ ಅವರು ಕೊರಟಾಲ ಶಿವ ನಿರ್ದೇಶನದ ಬಹುನಿರೀಕ್ಷಿತ 'ಆಚಾರ್ಯ' ಚಿತ್ರದ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
PublicNext
17/10/2021 10:09 pm