ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಶೂಟಿಂಗ್ ಭಾರೀ ಸದ್ದು ಮಾಡುತ್ತಿದೆ. ಚಿತ್ರೀಕರಣದ ವೇಳೆ ಪುನೀತ್ ಜೊತೆ ವಿದೇಶಿ ಹುಡುಗಿರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜೇಮ್ಸ್ ವೊಂದು ಆ್ಯಕ್ಷನ್ ಕಮರ್ಷಿಯಲ್ ಸಿನಿಮಾವಾಗಿದ್ದು, ಈಗಾಗಲೇ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ನಿರ್ದೇಶಕ ಚೇತನ್ ಕುಮಾರ್ ಜೇಮ್ಸ್ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಪುನೀತ್ ರಾಜ್‌ಕುಮಾರ್ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಪುನೀತ್‌ಗೆ ಜೋಡಿಯಾಗಿ ಕಾಲಿವುಡ್ ನಟಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ.
PublicNext
21/10/2021 03:10 pm