ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳೊಂದಿಗೆ ಶಿಲ್ಪಾ ಶೆಟ್ಟಿ ಸುತ್ತಾಟ: ರಾಜ್ ಕುಂದ್ರಾ ಮಿಸ್ಸಿಂಗ್ ಎಲ್ಲಿ ಎಂದ ಅಭಿಮಾನಿಗಳು

ಮುಂಬೈ: ನೀಲಿ ಚಿತ್ರ ನಿರ್ಮಾಣದ ಆರೋಪದಲ್ಲಿ ಕಾನೂನು ಸುಳಿಗೆ ಸಿಲುಕಿದ್ದ ರಾಜ್ ಕುಂದ್ರಾ ಬಿಡುಗಡೆಯಾಗಿದ್ದಾರೆ. ನಂತರದ ದಿನಗಳಲ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಈಗ ಮಕ್ಕಳೊಂದಿಗೆ ಸುತ್ತಾಡುತ್ತಿರುವ ಶಿಲ್ಪಾ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಜ್ ಕುಂದ್ರಾ ಕಾಣಿಸಿಕೊಳ್ಳದಿರುವುದರ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡ್ತಿದ್ದಾರೆ.

ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳ ಕ್ಯಾಮೆರಾಗಳತ್ತ ನಗುಮೊಗದ ರಿಪ್ಲೈ ಕೊಟ್ಟಿದ್ದಾರೆ. ಇದರ ಫೋಟೋಗಳನ್ನು ಶಿಲ್ಪಾ ಶೆಟ್ಟಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ರಾಜ್ ಕುಂದ್ರಾ ಎಲ್ಲಿ ಎಂದು ಕಾಮೆಂಟ್ ಮೂಲಕ ಕೇಳುತ್ತಿದ್ದಾರೆ.

Edited By : Nagaraj Tulugeri
PublicNext

PublicNext

24/10/2021 03:23 pm

Cinque Terre

32.2 K

Cinque Terre

1