ದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 67 ನೇ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಂದು ರಜನಿಕಾಂತ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ಸ್ವೀಕರಿಸಿದ್ದಾರೆ.
ಸಿನಿಮಾರಂಗದಲ್ಲಿ ಮಾಡಿದ ಅಪಾರ ಸಾಧನೆಗಾಗಿಯೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ನೀಡಲಾಗುತ್ತದೆ. ಅದರಂತೆ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಚಿತ್ರರಂಗದಲ್ಲಿ ಮಹಾನ್ ಸಾಧನೆ ಮಾಡಿದವರೇ. ಅವರಿಗೆ ಈಗ ದಾದಾಸಾಹೇಬ್ ಪ್ರಶಸ್ತಿ ಬಂದಿದೆ.2019 ರಲ್ಲಿಯೇ ಈ ಪ್ರಶಸ್ತಿ ಘೋಷಣೆ ಆಗಿದೆ. ಕೋವಿಡ್ ಕಾರಣದಿಂದ ಈಗ ರಜನಿಕಾಂತ್,ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಾರೆ.
PublicNext
25/10/2021 01:17 pm