ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮಾನವೀಯ ಕೃತ್ಯ: 5ರ ಬಾಲೆ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ ಆರೋಪ

ಲಕ್ನೋ: ಉತ್ತರ ಪ್ರದೇಶದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇಂತಹದ್ದೇ ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ಗಾಜಿಯಾಬಾದ್‌ನಲ್ಲಿ ಐದು ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ಬಾಲಕಿ ಟ್ಯೂಷನ್‌ಗಾಗಿ ತನ್ನ ಮನೆಗೆ ಬಂದಾಗ ಬಾಲಕ ಕೃತ್ಯವೆಸಗಿದ್ದಾನೆ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಸದ್ಯ ಮಕ್ಕಳ ಆರೈಕೆ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಮಗುವಿನ ತಂದೆ ಕುಟುಂಬ ನಿರ್ವಹಣೆಗಾಗಿ ರಿಕ್ಷಾ ಓಡಿಸುತ್ತಿದ್ದಾರೆ. ಆರೋಪ ಎದುರಿಸುತ್ತಿರುವ ಬಾಲಕನ ತಂದೆ ಶಿಕ್ಷಕರಾಗಿದ್ದಾರೆ. ಆತ ತನಗೆ ಸೇರಿದ ಮನೆಯನ್ನು ಬಾಡಿಗೆಗೆ ಕೊಡುವುದಾಗಿ ಹೇಳಿ ಕೃತ್ಯದ ಬಗ್ಗೆ ಚರ್ಚಿಸಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

Edited By : Vijay Kumar
PublicNext

PublicNext

28/10/2021 10:38 pm

Cinque Terre

56.9 K

Cinque Terre

0