ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ : ಆಸ್ಪತ್ರೆಯತ್ತ ಹರಿದು ಬರುತ್ತಿರುವ ತಾರಾಗಣ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿ. ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಸ್ಟಾರ್ ನಟರುಗಳ ದಂಡೆ ಹರಿದು ಬರುತ್ತಿದೆ. ನಟ ರವಿಚಂದ್ರನ್, ಯಶ್ ಸೇರಿದಂತೆ ಹಲವು ನಟರುಗಳು ಆಸ್ಪತ್ರೆಗೆ ಆಗಮಿಸಿದ್ದಾರೆ.

ಇನ್ನು ಆಸ್ಪತ್ರೆಯತ್ತ ಅಪ್ಪು ಅಭಿಮಾನಿಗಳು ಜಮಾಯಿಸುತ್ತಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಶಿವರಾಜ್ಕುಮಾರ್ ಅವರ ಬಹುನಿರೀಕ್ಷಿತ ಸಿನಿಮಾ 'ಭಜರಂಗಿ' ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್ ಗೆ ಹೋಗಲು ಪುನೀತ್ ಪ್ಲಾನ್ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.ಆಸ್ಪತ್ರೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಬಂದಿದ್ದಾರೆ. ಪುನೀತ್ ಅವರ ಮನೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸದ್ಯ ರಾಜ್ ಕುಟುಂಬ ಕಣ್ಣೀರಿಡುತ್ತಿದೆ.

Edited By : Nirmala Aralikatti
PublicNext

PublicNext

29/10/2021 12:54 pm

Cinque Terre

160.63 K

Cinque Terre

25