ಹುಬ್ಬಳ್ಳಿ: ಪ್ರೇಮಂ ಪೂಜ್ಯಂ ಚಿತ್ರದ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಲವ್ಲಿ ಸ್ಟಾರ್ ಪ್ರೇಮ್ ಅವರು ಊಟ ಮಾಡುವ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತ ಆಗಿದೆ ಎಂಬುವಂತ ಸುದ್ಧಿ ತಿಳಿಯುತ್ತಿದ್ದಂತೆ ಊಟ ಮಾಡುವುದನ್ನೇ ಬಿಟ್ಟು ಊಟದ ತಟ್ಟೆಯನ್ನು ಮರಳಿಸಿದ್ದಾರೆ.
ಪತ್ರಿಕಾಗೋಷ್ಠಿಯ ಬಳಿಕ ಪತ್ರಕರ್ತರ ಭವನದ ಕೆಳಗಿನ ಹೊಟೇಲ್ ನಲ್ಲಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಸುದ್ಧಿ ತಿಳಿಯುತ್ತಿದ್ದಂತೆಯೇ ಮನಸ್ಸಿಗೆ ನೋವು ಮಾಡಿಕೊಂಡಿರುವ ಪ್ರೇಮ್ ಊಟ ಮಾಡುವುದನ್ನು ಬಿಟ್ಟಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸ್ನೇಹಿತರಾಗಿ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಪ್ರೇಮ ಹಾಗೂ ಪುನೀತ್ ರಾಜ್‍ಕುಮಾರ್ ಏಕಾಏಕಿ ಸುದ್ಧಿ ತಿಳಿಯುತ್ತಿದ್ದಂತೆ ಪ್ರೇಮ ಅವರು ದಿಕ್ಕು ತೋಚದಂತೆ ಕುಳಿತಿದ್ದಾರೆ..
PublicNext
29/10/2021 01:04 pm