ಬೆಂಗಳೂರು: ಯಾರೂ ಕನಸುಮನಸಿನಲೂ ಊಹಿಸದ ರೀತಿಯಲ್ಲಿ ನಟ ಪುನೀತ್ ರಾಜ್‌ಕುಮಾರ್ ನಮ್ಮೆಲ್ಲರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ.
ಪುನೀತ್ ಅವರ ದೊಡ್ಡ ಮಗಳು ಅಮೆರಿಕದಿಂದ ಬರಬೇಕಾಗಿದೆ. ಈ ಮಧ್ಯೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಎಸ್‌ಪಿ ಗಿರೀಶ್, ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಪುನೀತ್ ಫಾರ್ಮ್ಹೌಸ್ಗೆ ಸರ್ಕಾರ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ದೊಡ್ಮನೆ ಕುಟುಂಬ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕು ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
PublicNext
29/10/2021 06:11 pm