ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರ ಕಂಠೀರವ ಕ್ರೀಡಾಂಗಣ ತಲುಪಿದೆ. ಆಂಬ್ಯುಲೆನ್ಸ್ ಮೂಲಕ ಪಾರ್ಥಿವ ಶರೀರವನ್ನು ಸದಾಶಿವನಗರದ ಪುನೀತ್ ರಾಜ್‌ಕುಮಾರ್ ಅವರ ನಿವಾಸದಿಂದ ಸ್ಟೇಡಿಯಂಗೆ ಸ್ಥಳಾಂತರಿಸಲಾಯಿತು.
ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಸರ್ಕಾರ ಹೇಳಿದೆ. ಇನ್ನು ಕಂಠೀರವ ಕ್ರೀಡಾಂಗಣದ ಬಳಿ ಸಾವಿರಾರು ಜನರು ಅಪ್ಪು ಅವರ ಅಂತಿಮ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗದಿಂದ ಬಂದಿದ್ದಾರೆ. ಸೂಚಿಸಿರುವ ಮಾರ್ಗ ಹೊರತುಪಡಿಸಿಯೂ ಕ್ರೀಡಾಂಗಣಕ್ಕೆ ಅಭಿಮಾನಿಗಳು ಬರುತ್ತಿರುವುದರಿಂದ ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
PublicNext
29/10/2021 07:26 pm