ಬೆಂಗಳೂರು: ಅಪ್ಪ ಡಾ.ರಾಜ್ಕುಮಾರ್, ಅಮ್ಮ ಪಾರ್ವತಮ್ಮ ರಾಜ್ಕುಮಾರ್ ಸಮಾಧಿ ಪಕ್ಕದಲ್ಲಿಯೇ ನಟ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪುನೀತ್ ಪುತ್ರಿ ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆಯಲ್ಲಿ ಭಾನುವಾರವೇ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
PublicNext
29/10/2021 09:23 pm