ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಪು ಅಂತಿಮ ದರ್ಶನಕ್ಕೆ ಹರಿದುಬಂದ ಜನ ಸಾಗರ

ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ನಟ ಪುನೀತ್​ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಜನ ಸಾಗರವೇ ಹರಿದುಬರುತ್ತಿದೆ. ಅಪ್ಪು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಮಲ್ಯ ಆಸ್ಪತ್ರೆ ಎದುರಿನ ದ್ವಾರದಿಂದ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿತ್ತು. ಅಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅನೇಕರು ಬ್ಯಾರಿಕೇಡ್‌ಗಳನ್ನು ಏರಿ ಕ್ರೀಡಾಂಗಣ ಪ್ರವೇಶಿಸಲು ಮುಂದಾದರು. ನೂಕು ನುಗ್ಗಲಿನಿಂದಾಗಿ ನೆಲಕ್ಕೆ ಬಿದ್ದು ಅಸ್ವಸ್ಥರಾದ ಕೆಲವರನ್ನು ಪೊಲೀಸರೇ ಕರೆತಂದು ಆರೈಕೆ ಮಾಡುತ್ತಿದ್ದ ದೃಶ್ಯ ಕಂಡುಬಂತು. ಅಭಿಮಾನಿಗಳ ಕೂಗಾಟ, ಚೀರಾಟ ಮುಗಿಲುಮುಟ್ಟಿತ್ತು. ಮಹಿಳೆಯರೂ ನೂಕು ನುಗ್ಗಲಿನಲ್ಲಿ ಸಿಲುಕಿ ಹೈರಾಣಾದರು.

Edited By : Vijay Kumar
PublicNext

PublicNext

29/10/2021 10:34 pm

Cinque Terre

162.25 K

Cinque Terre

11