ಬೆಂಗಳೂರು: ಅಪ್ಪ ಡಾ.ರಾಜ್‌ಕುಮಾರ್ ಮತ್ತು ಅಮ್ಮ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆಯೇ ಅಧಿಸೂಚನೆ ಹೊರಡಿಸಿದೆ. ಆದರೆ ಯಾವಾಗ ಅಂತ್ಯ ಸಂಸ್ಕಾರ ನಡೆಯಲಿದೆ ಎಂಬ ಮಾಹಿತಿ ನೀಡಿರಲಿಲ್ಲ.
ಸದ್ಯದ ಮಾಹಿತಿ ಪ್ರಕಾರ, ಇಂದು ಸಂಜೆಯೇ ಅಂತ್ಯಸಂಸ್ಕಾರ ನೆರವೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಂಠೀರವ ಸ್ಟುಡಿಯೋದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕಂಠೀರವ ಸ್ಟುಡಿಯೋ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೇ ಸಾರ್ವಜನಿಕ ಪ್ರವೇಶವಕ್ಕೂ ನಿಷೇಧ ಹೇರಲಾಗಿದೆ.
PublicNext
30/10/2021 09:27 am