ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶೋಕ: ಜಿಲ್ಲೆಯಾದ್ಯಂತ ಶ್ರದ್ಧಾಂಜಲಿ ಸಲ್ಲಿಕೆ

ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನಾದ್ಯಂತ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಭಾವಚಿತ್ರಕ್ಕೆ ಪೂಜಿಸಿ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕನ್ನಡ ಚಿತ್ರರಂಗದ ಧ್ರುವತಾರೆಯಂತಿದ್ದ ಪುನೀತ್ ರಾಜ್‌ಕುಮಾರ್ ಅಗಲಿಕೆಯಿಂದ ನಾಡಿನ ಕೋಟ್ಯಂತರ ಅಭಿಮಾನಿಗಳಿಗೆ ಹಾಗೂ ನಾಡಿಗೆ ಸಹಿಸಿಕೊಳ್ಳಲು ಆಗದ ಅನಿರೀಕ್ಷಿತ ಆಘಾತ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಸಾವು ಸಂಭವಿಸಿರುವದು ಇಡೀ ಚಿತ್ರರಂಗಕ್ಕೆ ಮತ್ತು ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದ್ದು, ಎಷ್ಟೇ ಎತ್ತರಕ್ಕೆ ಬೆಳೆದರೂ ಯಾವುದೇ ಗರ್ವ ಅಹಂಕಾರ ಇಲ್ಲದೇ ಅವರ ತಂದೆಯವರ ಹಾದಿಯಲ್ಲಿಯೇ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಸದಭಿರುಚಿಯ ಸಿನಿಮಾಗಳನ್ನು ಪ್ರೇಕ್ಷಕರ ಮುಂದೆ ಇಟ್ಟಿದ್ದಿರು.

ಚಂದನವನದ 'ಯುವ ರಾಜಕುಮಾರ' ಅಗಲಿಕೆಯಿಂದ ಇಡೀ ಕರುನಾಡೇ ದುಃಖದ ಮಡುವಿನಲ್ಲಿ ಮುಳುಗಿದೆ. ಸುರಪುರ ತಾಲ್ಲೂಕು ಘಟಕದ ಕರವೇ ಅಧ್ಯಕ್ಷರಾದ ವೆಂಕಟೇಶ ನಾಯಕ ಭೈರಿಮಡ್ಡಿ ಹಾಗೂ ಸದಸ್ಯರು ಕಂಬನಿ ಮಿಡಿದಿದ್ದಾರೆ. ಅಲ್ಲದೇ ಕುಂಬಾರಪೇಟೆಯಲ್ಲಿ ಸಹ ಅಪ್ಪು ಕಟೌಟ್‌ಗೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ತಡ ರಾತ್ರಿ ಮೇಣದ ಬತ್ತಿ ಹಚ್ಚಿ ಗೌರವ ಸಲ್ಲಿಸಿದರು.

ಇನ್ನು ಅಲ್ದಾಳ ಗ್ರಾಮದ ಯುವಕರು ನಗರದ ಗಾಂಧೀ ವೃತ್ತದಲ್ಲಿ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಅಲ್ಲದೇ ಅಲ್ದಾಳ ಗ್ರಾಮದಲ್ಲಿ ಕೂಡ ಯುವರತ್ನನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

Edited By : Vijay Kumar
PublicNext

PublicNext

30/10/2021 12:31 pm

Cinque Terre

60.72 K

Cinque Terre

1

ಸಂಬಂಧಿತ ಸುದ್ದಿ