ಬೆಂಗಳೂರು: ಸ್ಯಾಂಡಲ್‌ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆಯಲು ನಟಿ, ಮಾಜಿ ಸಂಸದೆ ರಮ್ಯಾ ಬೆಂಗಳೂರಿಗೆ ಆಗಮಿಸಿದ್ದಾರೆ.
ರಮ್ಯಾ ಅವರು ಮುಂಬೈದಿಂದ ನಗರದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, "ಅಪ್ಪು ಹಾಗೂ ನಾನು ಒಳ್ಳೆಯ ಸ್ನೇಹಿತರು. ನಮ್ಮ ಕುಟುಂಬದವರ ಜೊತೆಗೆ ತುಂಬಾ ಕ್ಲೋಸ್ ಆಗಿದ್ದರು. ಪುನೀತ್ ಅಕಾಲಿಕ ನಿಧನವು ನೋವು ತಂದಿದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿತ್ತಿರುವೆ" ಎಂದರು.
PublicNext
30/10/2021 02:25 pm