ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುನೀತ್ ಜವಾಬ್ದಾರಿಯಾಗಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ

ಬೆಂಗಳೂರು: ಲೆಕ್ಕವೇ ಇಲ್ಲದಷ್ಟು, ಸದ್ದಿಲ್ಲದೇ ಸಮಾಜಸೇವೆ ಮಾಡಿ ಮರೆಯಾದ ಕನ್ನಡದ ಮಾಣಿಕ್ಯ ನಟ ಪುನೀತ್ ಅವರು ಹೊಣೆ ಹೊತ್ತಿದ್ದ ಸುಮಾರು 1800 ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಮಿಳು ನಟ ವಿಶಾಲ್ ಅವರು ವಹಿಸಿಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ವಿಶಾಲ್ ಅವರು ಘೋಷಣೆ ಮಾಡಿದ್ದಾರೆ. ಅಕ್ಟೋಬರ್ 29 ರಂದು ಅಪ್ಪು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.

ಇನ್ನು ನಟ ವಿಶಾಲ್ ಅವರಿಗೆ ಕನ್ನಡಿಗರು ಹೃದಯತುಂಬಿ ಶಹಬ್ಬಾಸ್ ಎಂದಿದ್ದಾರೆ.

ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್ ಅವರು ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವು ತೆಗೆದುಕೊಂಡಿರುವ ನಿರ್ಣಯವನ್ನು ಅತ್ಯಂತ ವಿನಮ್ರವಾಗಿ ಪ್ರಕಟಿಸಿದ್ದಾರೆ.

Edited By : Nirmala Aralikatti
PublicNext

PublicNext

01/11/2021 11:57 am

Cinque Terre

106.21 K

Cinque Terre

59