ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಹೈದರಾಬಾದ್ ನ ಕೇರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕೃಷ್ಣ ಅವರು ಕಳೆದ ಆರು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ಭುಜದ ಶಸ್ತ್ರಚಿಕಿತ್ಸೆ ಅಗತ್ಯವಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ, ಶರೀರದ ಅಂತಿಮ ದರ್ಶನಕ್ಕೆ ಶನಿವಾರ ನಂದಮೂರಿ ಬಾಲಕೃಷ್ಣ ಬೆಂಗಳೂರಿಗೆ ಆಗಮಿಸಿದ್ದರು. ಪುನೀತ್ ರಾಜ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಸದ್ಯ ಬಾಲಕೃಷ್ಣ ಅವರು ಆರೋಗ್ಯವಾಗಿದ್ದಾರೆ. ಕೆಲ ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ತಿಳಿದು ಬಂದಿದೆ.
PublicNext
02/11/2021 11:18 pm