ಬೆಂಗಳೂರು: ಇಂದು (ನವೆಂಬರ್ 08) ಬೆಳಿಗ್ಗೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಟ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ಸ್ಥಳದಲ್ಲಿ 11 ನೇ ದಿನದ ಕಾರ್ಯ ನಡೆಯಲಿದೆ. ಹೀಗಾಗಿ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಮಧ್ಯಾಹ್ನ 12 ಗಂಟೆ ನಂತರವಷ್ಟೇ ಸಾರ್ವಜನಿಕರು ಸಮಾಧಿ ಸ್ಥಳ ವೀಕ್ಷಿಸಬಹುದಾಗಿದೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರು ಅಗಲಿ ನವೆಂಬರ್ 8ಕ್ಕೆ ಹನ್ನೊಂದು ದಿನ ಪೂರ್ಣವಾಗಿದೆ. ಬೆಳಗ್ಗೆ ಪುಣ್ಯಸ್ಮರಣೆ ಕಾರ್ಯಕ್ರಮ ಇರುವುದರಿಂದ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿಯಿರುವ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ವೀಕ್ಷಣೆಗೆ ಮಧ್ಯಾಹ್ನ 12 ಗಂಟೆಯ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.
PublicNext
08/11/2021 07:37 am