ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಬಳಿಕ ಮೊದಲ ಬಾರಿಗೆ ಪತ್ನಿ ಅಶ್ವಿನಿ ಪತ್ರದ ಮೂಲಕ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಧನ್ಯವಾದ ತಿಳಿಸಿ ಪತ್ರ ಬರೆದಿರುವ ಅವರು ವಿಶೇಷವಾಗಿ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸರಿಗೆ ಥ್ಯಾಂಕ್ಸ್ ಹೇಳಿದ್ದಾರೆ.
ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಅವರನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡಬೇಕಿತ್ತು. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿ, ಮೆರವಣಿಗೆ ಹಾಗೂ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸ್ ನಿಯೋಜಿಸಿ, ಕಾನೂನು ಸುವ್ಯವಸ್ಥೆಗೆ ಎಲ್ಲಿಯೂ ಧಕ್ಕೆ ಆಗದಂತೆ ನೋಡಿಕೊಂಡಿದ್ದೀರಿ ಎಂದು ಬರೆದಿದ್ದಾರೆ.
ನಮ್ಮ ಇಡೀ ಕುಟುಂಬ ಹಾಗೂ ಎಲ್ಲ ಅಭಿಮಾನಿಗಳ ಪರವಾಗಿ ನಿಮಗೆ ಮತ್ತು ಎಲ್ಲ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪತ್ರ ಮುಖೇನ ಅಶ್ವಿನಿ ಪುನೀತ್ ರಾಜ್‌ಕುಮಾರ್ ಧನ್ಯವಾದ ಹೇಳಿದ್ದಾರೆ.
PublicNext
08/11/2021 08:46 am