ಮಡಿಕೇರಿ: ನಟ ಪುನೀತ್ ರಾಜ್‌ಕುಮಾರ್ ಎಲ್ಲರ ಬದುಕಿಗೆ ಸ್ಫೂರ್ತಿಯಾಗಿದ್ದವರು. ನಗುಮೊಗದಿಂದ ಎಲ್ಲರಿಗೂ ಪಾಸಿಟಿವ್ ವಿಚಾರಗಳನ್ನೇ ಹೇಳುತ್ತಿದ್ದರು. ಹೀಗಾಗಿ ಅಪ್ಪು ಅವರ ಅಭಿಮಾನಿಗಳಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ದಯವಿಟ್ಟು ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ನಟ ವಿಜಯ ರಾಘವೇಂದ್ರ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆಯುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ಪು ಅವರು ಎಲ್ಲರಿಗೂ ಸ್ಫೂರ್ತಿಯಾಗಿ ಬದುಕಿದ್ದರು. ಹೀಗಿರುವಾಗ ಅವರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ. ಅಪ್ಪು ಅವರಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರಾ ಅದು ಗೊತ್ತಿಲ್ಲ. ಆದರೆ ಅವರಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲಾಗುತ್ತಿದೆ ಎಂದು ಸುದ್ದಿ ಹರಡುತ್ತಿದೆ. ದಯವಿಟ್ಟು ಅದು ಆಗಬಾರದು ಎಂದು ಮನವಿ ಮಾಡಿದ್ದಾರೆ.
PublicNext
09/11/2021 07:37 am