ಬೆಂಗಳೂರಿಗೆ ಮೆಟ್ರೋ ಬರಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಇದಕ್ಕಾಗಿಯೇ ಸ್ವಂತ ಖರ್ಚಿನಲ್ಲಿ ವಿದೇಶಕ್ಕೆ ತೆರಳಿ ಈ ಬಗ್ಗೆ ತಿಳಿದುಕೊಂಡು ಬಂದಿದ್ದರು. ಈಗ ನಮ್ಮ ಮೆಟ್ರೋ ಬದಲು, ಶಂಕರ್ ನಾಗ್ ಮೆಟ್ರೋ ಎಂದಾಗಲಿ ಎನ್ನುವ ಆಗ್ರಹ ಕೇಳಿ ಬಂದಿದೆ. ಶಂಕರ್ ನಾಗ್ ಅವರು ಕನ್ನಡ ನಾಡು ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. ವಿಧಿಯಾಟ ಅವರು 36ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ.
ಆಗಿನ ಕಾಲದಲ್ಲೇ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿದ ಖ್ಯಾತಿ ಶಂಕರ್ ನಾಗ್ ಗೆ ಸಲ್ಲುತ್ತದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಿ ಹಲವು ವರ್ಷ ಕಳೆದಿದೆ. ಟ್ರಾಫಿಕ್ ಕಿರಿಕಿರಿ ತಪ್ಪಿದೆ. ಈ ಯೋಜನೆಯ ಕನಸ್ಸು ಕಂಡಿದ ಅವರ ಹೆಸರನ್ನು ನಮ್ಮ ಮೆಟ್ರೋಗೆ ಇಡಬೇಕು. ಇಡೀ ಮೆಟ್ರೋ ಹೆಸರನ್ನು ಬದಲಿಸಲು ಸಾಧ್ಯವಾಗದಿದ್ದರೆ ಒಂದು ನಿಲ್ದಾಣಕ್ಕೆ ಶಂಕರ್ ನಾಗ್ ಅವರ ಹೆಸರನ್ನು ಇಡಿ ಎಂದು ಶಂಕರ್ ನಾಗ್ ಫ್ಯಾನ್ ಕ್ಲಬ್ ನವರು ಟ್ವೀಟ್ ಮಾಡಿದ್ದಾರೆ.
PublicNext
10/11/2021 01:44 pm