ಇತ್ತಿಚೆಗೆ ಪದ್ಮಶ್ರೀ ಪ್ರಶಸ್ತಿ ಪಡೆದ ನಟಿ ಕಂಗನಾ ವಿವಾದಾತ್ಮಕ ಹೇಳಿಕೆವೊಂದನಾ ನೀಡುವ ಮೂಲಕ ಸದ್ಯ ಸುದ್ದಿಯಲ್ಲಿದ್ಧಾರೆ.ಹೌದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಂಗನಾ ರಣಾವತ್ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
‘’1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ’’ ಎಂದು ಕಂಗನಾ ರಣಾವತ್ ಹೇಳಿದ್ದರು. ಕಂಗನಾ ರಣಾವತ್ ಅವರ ಈ ಹೇಳಿಕೆ ಹಲವರನ್ನು ಕೆರಳಿಸಿದೆ. ಕಂಗನಾ ರಣಾವತ್ ವಿರುದ್ಧ ನೆಟ್ಟಿಗರು, ರಾಜಕಾರಣಿಗಳು, ತಾರೆಯರು ಗರಮ ಆಗಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಆಮ್ ಆದ್ಮಿ ಪಕ್ಷದ ಪ್ರೀತಿ ಮೆನನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಕಂಗನಾ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
PublicNext
12/11/2021 07:08 pm