ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪುನೀತ್‌ ನಮನ ಕಾರ್ಯಕ್ರಮ, ಅರಮನೆ ಮೈದಾನ ಸುತ್ತ ಬಂದೋಬಸ್ತ್

ಬೆಂಗಳೂರು: ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ಹಿನ್ನಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ.

ಸುಮಾರು 2 ಸಾವಿರ ಜನ ಆಗಮಿಸುವ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಬಂದೋಬಸ್ತ್ ಮಾಡಲಾಗಿದೆ. ಪ್ರಮುಖವಾಗಿ ಗಾಯತ್ರಿ ವಿಹಾರ್ ಬಳಿ ಹೆಚ್ಚಿನ ಭದ್ರತೆ ಮಾಡಲಾಗಿದೆ‌. ಇನ್ನು ಸಂಚಾರಿ ಪೂರ್ವ ವಿಭಾಗ ಡಿಸಿಪಿ ಶಾಂತಾರಾಜು ನೇತೃತ್ವದಲ್ಲಿ 200ಕ್ಕೂ ಹೆಚ್ಚು ಸಂಚಾರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಾಹನ ನಿಲುಗಡೆ, ಸಂಚಾರ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.

ಸೆಲೆಬ್ರಿಟಿಗಳನ್ನು ನೋಡಲು ಬರುವ ಸಾರ್ವಜನಿಕರನ್ನು ನಿಯಂತ್ರಿಸುವ ಉದ್ದೇಶದಿಂದ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

Edited By : Vijay Kumar
PublicNext

PublicNext

16/11/2021 12:40 pm

Cinque Terre

31.88 K

Cinque Terre

0