ಮುಂಬೈ: 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ 'ಭಿಕ್ಷೆ' ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್, ಇದೀಗ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ಮಂತ್ರವನ್ನೇ ಗೇಲಿ ಮಾಡಿದ್ದಾರೆ.
ಗಾಂಧೀಜಿ ಅವರಿಂದ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್‌ಗೆ ಬೆಂಬಲವೇ ಸಿಗಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು ಎಂಬ ಬಾಪು ಮಂತ್ರ ಅನುಸರಿಸಿದರೆ ಸ್ವಾತಂತ್ರ್ಯ ಸಿಗುವುದಿಲ್ಲ, ಬದಲಾಗಿ ಭಿಕ್ಷೆ ಮಾತ್ರ ಸಿಗುತ್ತದೆ. ಹೀಗಾಗಿ ನಿಮ್ಮ ನಾಯಕರನ್ನು ನೀವು ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಕಂಗನಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
PublicNext
17/11/2021 09:24 am