ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಡಬ್ಬಿಂಗ್ ಹಾಗೂ ರೀರೆಕಾರ್ಡಿಂಗ್ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.
ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರಾಗಿ ಸುನಿತಾ ಪ್ರಕಾಶ್ ಕೆಲಸ ಮಾಡಿದ್ದಾರೆ.
ಕೆ.ಕಲ್ಯಾಣ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ತಂದೆ ಮಗನ ಬಾಂಧವ್ಯದ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಉಮೇಶ್ ಬಣಕರ್, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
PublicNext
17/11/2021 10:32 pm