ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ನಟ ದುನಿಯಾ ವಿಜಯ್‌ಗೆ ಪಿತೃವಿಯೋಗ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ತಂದೆ ರುದ್ರಪ್ಪ (81) ಇಂದು ನಿಧನ ಹೊಂದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು, ಕಳೆದ ಎರಡು- ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 7:30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಆನೇಕಲ್​ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದುನಿಯಾ ವಿಜಯ್ ಕುಟುಂಬದ ಮೂಲಗಳಿಂದ ಮಾಹಿತಿ ಲಭಿಸಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ಇಹಲೋಕ ತ್ಯಜಿಸಿದ್ದರು.

Edited By : Vijay Kumar
PublicNext

PublicNext

18/11/2021 11:04 am

Cinque Terre

55.98 K

Cinque Terre

8

ಸಂಬಂಧಿತ ಸುದ್ದಿ