ಬೆಂಗಳೂರು : 2003ರಲ್ಲಿ ತೆರೆಕಂಡ ಅಭಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ರಮ್ಯಾ ಹಲವು ಸೂಪರ್ ಹಿಟ್ ಸಿನಿಮಾಗಳ ಮೂಲಕ ಅಪಾರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ಎಂಬ ಬಿರುದು ಪಡೆದ ನಟಿ ಇಂದು 39 ನೇ ವಸಂತಕ್ಕೆ ಕಾಲಿಟ್ಟಿದ್ದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
ನವೆಂಬರ್ 29, 1982 ರಂದು ಬೆಂಗಳೂರಿನಲ್ಲಿ ಜನಿಸಿದವರು ದಿವ್ಯಾ ಸ್ಪಂದನ. ಊಟಿಯ ರೆಸಿಡೆನ್ಷಿಯಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ ದಿವ್ಯಾ ಸ್ಪಂದನ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಪದವಿ ಪಡೆದರು. ಬಳಿಕ ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ದಿವ್ಯಾ ಸ್ಪಂದನಗೆ ಚಿತ್ರರಂಗದ ಕಡೆಯಿಂದಲೂ ಅವಕಾಶಗಳು ಹುಡುಕಿಕೊಂಡು ಬರಲು ಆರಂಭಿಸಿದವು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ‘ಅಭಿ’ ಚಿತ್ರದ ಮೂಲಕ ದಿವ್ಯಾ ಸ್ಪಂದನ.. ರಮ್ಯಾ ಆಗಿ ಕನ್ನಡ ಚಿತ್ರರಂಗಕ್ಕೆ ಗುರುತಿಸಿಕೊಂಡರು.
PublicNext
29/11/2021 01:13 pm