ಬೆಂಗಳೂರು:ಕನ್ನಡದ ಹಿರಿಯ ನಟ ಶಿವರಾಮ್ ಆಗೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಐಸಿಯುನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಕಳೆದ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆಯನ್ನೂ ಕೊಡಿಸ್ತಿದ್ದೇವೆ ಎಂದು ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಹೇಳಿದ್ದಾರೆ.
ಮೊನ್ನೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ರೂಮ್ ಗೆ ಹೋಗಿದ್ದರು. ಈ ವೇಳೆ ರೂಮ್ ನಲ್ಲಿಯೇ ಬಿದ್ದಿದ್ದರು. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಸರ್ಜರಿ ಮಾಡಬೇಕು ಅಂದ್ರು. ಆದರೆ ನಮ್ಮ ತಂದೆಗೆ ವಯಸ್ಸಾಗಿದೆ ಈ ಕಾರಣಕ್ಕೆ ಸರ್ಜರಿ ಮಾಡಲಾಗಿಲ್ಲ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ ಎಂದು ರವಿಶಂಕರ್ ತಿಳಿಸಿದ್ದಾರೆ.
PublicNext
02/12/2021 01:28 pm