ಬೆಂಗಳೂರು : ಕನ್ನಡದ ಹಿರಿಯ ನಟ ಶಿವರಾಂ ಅವರು ಇಂದು (ಡಿ 4) ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಅವರ ಪಾರ್ಥೀವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ‘ಶಿವರಾಮಣ್ಣ’ ಅಂತಲೇ ಹೆಸರುವಾಸಿಯಾಗಿದ್ದ ಇವರು, ಚಿಕ್ಕವಯಸ್ಸಿನಲ್ಲೇ ನಟನೆಯತ್ತ ಆಸಕ್ತಿ ಬೆಳೆಸಿಕೊಂಡ ಶಿವರಾಂ ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು. ಆ ನಂತರ ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು.
1958 ರಿಂದ ಶಿವರಾಂ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
PublicNext
04/12/2021 03:23 pm